ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸ್ಗಳ) ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಾತಿಗಾಗಿ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್ಗಳಿಗೆ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ.
ಪೋಷಕರ ವಾರ್ಷಿಕ ಆದಾಯ ಮಿತಿ:
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಈ ಕೆಳಗಿನ ಮಿತಿಯೊಳಗಿರಬೇಕು:
| ವಿದ್ಯಾರ್ಥಿಯ ಪ್ರವರ್ಗ / ಜನಾಂಗ | ಗರಿಷ್ಠ ವಾರ್ಷಿಕ ಆದಾಯ ಮಿತಿ |
| ಪ್ರವರ್ಗ-1, ಎಸ್.ಸಿ (SC) ಮತ್ತು ಎಸ್.ಟಿ (ST) | ರೂ. 2.50 ಲಕ್ಷ |
| ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳು | ರೂ. 1.00 ಲಕ್ಷ |
ಬಿಸಿಎಂ ಹಾಸ್ಟೆಲ್ ಪ್ರವೇಶಾತಿ ಆರಂಭ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ದಾಖಲಾತಿಗೆ ಆನ್ಲೈನ್ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ಲಿಂಕ್: ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಕೊನೆಯ ದಿನಾಂಕ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20.07.2026 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿ: ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಬೇಕಾಗುವ ಅರ್ಹತೆಗಳು ಮತ್ತು ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://bcwd.karnataka.gov.in/ ಅನ್ನು ನೋಡಬಹುದು.
ಸಹಾಯವಾಣಿ ಮತ್ತು ತಾಂತ್ರಿಕ ತೊಂದರೆಗಳ ಪರಿಹಾರ:
ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ತಮ್ಮ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ: 8050770004

ಈ ಪುಟಗಳನ್ನು ಓದಿ……..
ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ: ವಿವಿಧ ಉದ್ಯಮಗಳ ಕನಿಷ್ಠ ವೇತನ ಪರಿಷ್ಕರಿಸಿ ಕರ್ನಾಟಕ ಸರ್ಕಾರ ಆದೇಶ!
