Telegram Join My Telegram WhatsApp Join My WhatsApp

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ: ಹಾಲ್‌ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ (Admit Card) ಈಗ ಲಭ್ಯವಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದ್ದು, ಪೋಷಕರು ಮತ್ತು ಅಭ್ಯರ್ಥಿಗಳು ಇವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ದಿನಾಂಕ ಮತ್ತು ಸಮಯ:

  • ದಿನಾಂಕ: ಮಾರ್ಚ್ 01, 2026 (ಭಾನುವಾರ).

  • ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ರವರೆಗೆ ಪರೀಕ್ಷೆ ನಡೆಯಲಿದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ? ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ವಸತಿ ಶಾಲೆಗಳ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಾಧಿಕಾರ ಕೋರಿದೆ.

ಗಮನಿಸಿ: ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡಬಹುದು

ಈ ಪುಟಗಳನ್ನು ಓದಿ…

PM-Kisan ಹಣ ಬರಬೇಕೆ? ಫೆಬ್ರವರಿ 25 ರೊಳಗೆ ಈ 3 ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್! ಕೂಡಲೇ ಸೆಂಟ್ರಲ್ ಐಡಿ (Central ID) ಮಾಡಿಸಿಕೊಳ್ಳಿ.

Leave a Comment